Baluvantha Hoove Baduvase Eke Lyrics

ಬಾಳುವಂತ ಹೂವೆ ಬಾಡುವ ಆಸೆ ಏಕೆ Lyrics

in Aakasmika

in ಆಕಸ್ಮಿಕ

Video:
ಸಂಗೀತ ವೀಡಿಯೊ:

LYRIC

Song Details Page after Lyrice

ಬಾಳುವಂತ ಹೂವೇ ಬಾಡುವ ಆಸೆ ಏಕೆ
ಬಾಳುವಂತ ಹೂವೇ ಬಾಡುವ ಆಸೆ ಏಕೆ
ಹಾಡುವಂತ ಕೋಗಿಲೆ ಅಳುವ ಆಸೆ ಏಕೆ
ಕವಲು ದಾರಿಯಲ್ಲಿ ಬಾಳು ಸಾಧ್ಯವೇ
ಅವಳಿ ದೋಣಿ ಮೇಲೆ ಯಾನ ಯೋಗ್ಯವೇ
 
|| ಬಾಳುವಂತ ಹೂವೆ ಬಾಡುವ ಆಸೆ ಏಕೆ
ಹಾಡುವಂತ ಕೋಗಿಲೆ ಅಳುವ ಆಸೆ ಏಕೆ ||
 
ಯಾರಿಗಿಲ್ಲ ನೋವು ,ಯಾರಿಗಿಲ್ಲ ಸಾವು
ವ್ಯರ್ಥ ವ್ಯಸನದಿಂದ ,ಸಿಹಿಯು ಕೂಡ ಬೇವು
ಬಾಳು ಒಂದು ಸಂತೆ ,ಸಂತೆ ತುಂಬ ಚಿಂತೆ
ಮದ್ಯ ಮದಗಳಿಂದ,ಚಿಂತೆ  ಬೆಳೆವುದಂತೆ
ಅಂಕೆ ಇರದ ಮನಸನು ,ದಂಡಿಸುವುದು ನ್ಯಾಯ
ಮೂಕ ಮುಗ್ಧ ದೇಹವ ,ಹಿಂಸಿಸುವುದು ಹೇಯ
ಸಣ್ಣ ಬಿರುಕು ಸಾಲದೆ ,ತುಂಬು ದೋಣಿ ತಳ ಸೇರಲು
ಸಣ್ಣ ಅಳುಕು ಸಾಲದೆ ತುಂಬು ಬದುಕು ಬರಡಾಗಲು

|| ಬಾಳುವಂತ ಹೂವೆ ಬಾಡುವ ಆಸೆ ಏಕೆ
ಹಾಡುವಂತ ಕೋಗಿಲೆ  ಅಳುವ ಆಸೆ ಏಕೆ ||
 
ಬಾಳ ಕದನದಲ್ಲಿ ,ಭರವಸೆಗಳು ಬೇಕು
ನಾಳೆ ನನ್ನದೆನ್ನುವ ನಂಬಿಕೆಗಳು ಬೇಕು
ಜೀವರಾಶಿಯಲ್ಲಿ ಮಾನವರಿಗೆ ಆದ್ಯತೆ
ನಾವೇ ಮೂಢರಾದರೆ ಜ್ಞಾನಕೆಲ್ಲಿ ಪೂಜ್ಯತೆ
ಇಲ್ಲಿ ಈಸಬೇಕು ,ಇದ್ದು ಜಯಿಸಬೇಕು
ನಾಗರಿಕರಾದ ಮೇಲೆ ಸುಗುಣರಾಗಬೇಕು
ನಿನ್ನ ಹಳದಿ ಕಣ್ಣಲಿ ಜನರನೇಕೆ ನೀ ನೋಡುವೆ
ಮನದ ಡೊಂಕು ಕಾಣದೇ ಜಗವನೇಕೆ ನೀ ದೂರುವೇ

|| ಬಾಳುವಂತ ಹೂವೆ ಬಾಡುವ ಆಸೆ ಏಕೆ
ಹಾಡುವಂತ ಕೋಗಿಲೆ ಅಳುವ ಆಸೆ ಏಕೆ
ಕವಲು ದಾರಿಯಲ್ಲಿ ಬಾಳು ಸಾಧ್ಯವೆ
ಅವಳಿ ದೋಣಿ ಮೇಲೆ ಯಾನ ಯೋಗ್ಯವೇ||

||ಬಾಳುವಂತ ಹೂವೆ ಬಾಡುವ ಆಸೆ ಏಕೆ
ಹಾಡುವಂತ ಕೋಗಿಲೆ ಅಳುವ ಆಸೆ ಏಕೆ ||
 

ಬಾಳುವಂತ ಹೂವೇ ಬಾಡುವ ಆಸೆ ಏಕೆ
ಬಾಳುವಂತ ಹೂವೇ ಬಾಡುವ ಆಸೆ ಏಕೆ
ಹಾಡುವಂತ ಕೋಗಿಲೆ ಅಳುವ ಆಸೆ ಏಕೆ
ಕವಲು ದಾರಿಯಲ್ಲಿ ಬಾಳು ಸಾಧ್ಯವೇ
ಅವಳಿ ದೋಣಿ ಮೇಲೆ ಯಾನ ಯೋಗ್ಯವೇ
 
|| ಬಾಳುವಂತ ಹೂವೆ ಬಾಡುವ ಆಸೆ ಏಕೆ
ಹಾಡುವಂತ ಕೋಗಿಲೆ ಅಳುವ ಆಸೆ ಏಕೆ ||
 
ಯಾರಿಗಿಲ್ಲ ನೋವು ,ಯಾರಿಗಿಲ್ಲ ಸಾವು
ವ್ಯರ್ಥ ವ್ಯಸನದಿಂದ ,ಸಿಹಿಯು ಕೂಡ ಬೇವು
ಬಾಳು ಒಂದು ಸಂತೆ ,ಸಂತೆ ತುಂಬ ಚಿಂತೆ
ಮದ್ಯ ಮದಗಳಿಂದ,ಚಿಂತೆ  ಬೆಳೆವುದಂತೆ
ಅಂಕೆ ಇರದ ಮನಸನು ,ದಂಡಿಸುವುದು ನ್ಯಾಯ
ಮೂಕ ಮುಗ್ಧ ದೇಹವ ,ಹಿಂಸಿಸುವುದು ಹೇಯ
ಸಣ್ಣ ಬಿರುಕು ಸಾಲದೆ ,ತುಂಬು ದೋಣಿ ತಳ ಸೇರಲು
ಸಣ್ಣ ಅಳುಕು ಸಾಲದೆ ತುಂಬು ಬದುಕು ಬರಡಾಗಲು

|| ಬಾಳುವಂತ ಹೂವೆ ಬಾಡುವ ಆಸೆ ಏಕೆ
ಹಾಡುವಂತ ಕೋಗಿಲೆ  ಅಳುವ ಆಸೆ ಏಕೆ ||
 
ಬಾಳ ಕದನದಲ್ಲಿ ,ಭರವಸೆಗಳು ಬೇಕು
ನಾಳೆ ನನ್ನದೆನ್ನುವ ನಂಬಿಕೆಗಳು ಬೇಕು
ಜೀವರಾಶಿಯಲ್ಲಿ ಮಾನವರಿಗೆ ಆದ್ಯತೆ
ನಾವೇ ಮೂಢರಾದರೆ ಜ್ಞಾನಕೆಲ್ಲಿ ಪೂಜ್ಯತೆ
ಇಲ್ಲಿ ಈಸಬೇಕು ,ಇದ್ದು ಜಯಿಸಬೇಕು
ನಾಗರಿಕರಾದ ಮೇಲೆ ಸುಗುಣರಾಗಬೇಕು
ನಿನ್ನ ಹಳದಿ ಕಣ್ಣಲಿ ಜನರನೇಕೆ ನೀ ನೋಡುವೆ
ಮನದ ಡೊಂಕು ಕಾಣದೇ ಜಗವನೇಕೆ ನೀ ದೂರುವೇ

|| ಬಾಳುವಂತ ಹೂವೆ ಬಾಡುವ ಆಸೆ ಏಕೆ
ಹಾಡುವಂತ ಕೋಗಿಲೆ ಅಳುವ ಆಸೆ ಏಕೆ
ಕವಲು ದಾರಿಯಲ್ಲಿ ಬಾಳು ಸಾಧ್ಯವೆ
ಅವಳಿ ದೋಣಿ ಮೇಲೆ ಯಾನ ಯೋಗ್ಯವೇ||

||ಬಾಳುವಂತ ಹೂವೆ ಬಾಡುವ ಆಸೆ ಏಕೆ
ಹಾಡುವಂತ ಕೋಗಿಲೆ ಅಳುವ ಆಸೆ ಏಕೆ ||
 

Baluvantha Hoove Baduvase Eke song lyrics from Kannada Movie Aakasmika starring Dr Rajkumar, Madhavi, Geetha, Lyrics penned by Hamsalekha Sung by Dr Rajkumar, Music Composed by Hamsalekha, film is Directed by T S Nagabharana and film is released on 1993
x

Add Comment

ಪ್ರೊಫೈಲ್ ನಿರ್ವಹಣೆ

x

Login

ಒಳನಡೆ

x

Register

ನೋಂದಾಯಿಸಿ

x

Forget Password

ಪಾಸ್ವರ್ಡ್ ಮರೆತಿರುವಿರಾ ?

x

Change Password

ಗುಪ್ತಪದವನ್ನು ಬದಲಿಸಿ

x

Profile Management

ಪ್ರೊಫೈಲ್ ನಿರ್ವಹಣೆ