ಬಭ್ರುವಾಹನ : ಯಾರು ತಿಳಿಯರು ನಿನ್ನ ಭುಜಬಲದ ಪರಾಕ್ರಮ....
ಸಮರದೋಳ್ ಆರ್ಜಿಸಿದ ಆ ನಿನ್ನ ವಿಜಯಗಳ ಮರ್ಮ
ಎಲ್ಲದಕು ಕಾರಣನು ಶ್ರೀಕೃಷ್ಣ ಪರಮಾತ್ಮ
ಹಗಲಿರುಳು ನೆರಳಂತೆ ತಲೆ ಕಾಯ್ದು ಕಾಪಾಡಿ
ಜಯವ ತಂದಿತ್ತ ಆ ಯದುನಂದನ
ಅವನಿಲ್ಲದೆ ಬಂದ ನೀನು ತೃಣಕ್ಕೆ ಸಮಾನ
ಅರ್ಜುನ : ಅಸಹಾಯ ಶೂರ ನಾ ಅಕ್ಷೀಣ ಬಲನೋ
ಹರನೊಡನೆ ಹೋರಾಡಿ ಪಾಶುಪತವಂ ಪಡೆದವನೋ
ಆಗ್ರಹದೊಳೆದುರಾಗೊ ಅರಿಗಳಂ
ನಿಗ್ರಹಿಸೋ ವ್ಯಾಘ್ರನಿವನೋ... ಉಗ್ರಪ್ರತಾಪೀ……
ಬಭ್ರುವಾಹನ : ಓ ಹೊ ಒ ಹೋ ಉಗ್ರಪ್ರತಾಪಿ ಆ!
ಸಭೆಯೊಳಗೆ ದ್ರೌಪತಿಯ ಸೀರೆಯನು
ಸೆಳೆವಾಗ ಎಲ್ಲಿ ಅಡಗಿತ್ತೋ ಈ ನಿನ್ನ ಶೌರ್ಯ
ನೂಪುರಂಗಳ ಕಟ್ಟಿ ನಟಿಸಿ ತಕಥೈ ಎಂದು
ನಾಟ್ಯ ಕಲಿಸಿದ ನಪುಂಸಕ ನೀನು
ಚಕ್ರವ್ಯೂಹದೆ ನುಗ್ಗಿ ಛಲದಿಂದ ಛೇದಿಸದೆ
ಮಗನನ್ನು ಬಲಿ ಕೊಟ್ಟ ಭ್ರಷ್ಟಾ ನೀನು
ಗಂಡುಗಲಿಗಳ ಗೆಲ್ಲೊ ಗುಂಡಿಗೆಯು ನಿನಗೆಲ್ಲೋ
ಖಂಡಿಸಿದೇ ಉಳಿಸುವೆ ಹೋಗೋ
ಹೋಗೆಲೋ ಶಿಖಂಡಿ……..
ಅರ್ಜುನ : ಫಡ ಫಡ ಶಿಖಂಡಿಯಂದಡಿಗಡಿಗೆ
ನುಡಿಯ ಬೇಡೆಲೋ ಮೂಢ
ಭಂಡರೆದೆ ಗುಂಡಿಗೆಯ ಖಂಡಿಸುತಾ ರಣಚಂಡಿ
ಗೌತಣವೀವ ಈ ಗಾಂಡೀವಿ
ಗಂಡುಗಲಿಗಳ ಗಂಡ ಉದ್ಧಂಡ
ಭೂಮಂಡಲದೊಳಖಂಡ ಕೀರ್ತಿ ಪ್ರಚಂಡ
ಬಭ್ರುವಾಹನ : ಚಂಡನೋ ಪ್ರಚಂಡನೋ ಪುಂಡನೋ
ನಿರ್ಧರಿಸುವುದು ರಣರಂಗ
ಹೂಡು ಬಾಣಗಳ ಮಾಡುವೆ ಮಾನಭಂಗ
ಅರ್ಜುನ : ಕದನದೋಳ್ ಕಲಿಪಾರ್ಥನಂ ಕೆಣಕಿ ಉಳಿದವರಿಲ್ಲ
ಬಭ್ರುವಾಹನ : ಅಬ್ಬರಿಸಿ ಭೊಬ್ಭಿರಿದರಿಲ್ಲಾರಿಗೂ ಭಯವಿಲ್ಲ
ಅರ್ಜುನ : ಆರ್ಭಟಿಸಿ ಬರುತಿದೆ ನೋಡು ಅಂತಕನ ಆಹ್ವಾನ
ಬಭ್ರುವಾಹನ : ಅಂತಕನಿಗೆ ಅಂತಕನು ಈ ಬಭ್ರುವಾಹನ…..
ಬಭ್ರುವಾಹನ : ಯಾರು ತಿಳಿಯರು ನಿನ್ನ ಭುಜಬಲದ ಪರಾಕ್ರಮ....
ಸಮರದೋಳ್ ಆರ್ಜಿಸಿದ ಆ ನಿನ್ನ ವಿಜಯಗಳ ಮರ್ಮ
ಎಲ್ಲದಕು ಕಾರಣನು ಶ್ರೀಕೃಷ್ಣ ಪರಮಾತ್ಮ
ಹಗಲಿರುಳು ನೆರಳಂತೆ ತಲೆ ಕಾಯ್ದು ಕಾಪಾಡಿ
ಜಯವ ತಂದಿತ್ತ ಆ ಯದುನಂದನ
ಅವನಿಲ್ಲದೆ ಬಂದ ನೀನು ತೃಣಕ್ಕೆ ಸಮಾನ
ಅರ್ಜುನ : ಅಸಹಾಯ ಶೂರ ನಾ ಅಕ್ಷೀಣ ಬಲನೋ
ಹರನೊಡನೆ ಹೋರಾಡಿ ಪಾಶುಪತವಂ ಪಡೆದವನೋ
ಆಗ್ರಹದೊಳೆದುರಾಗೊ ಅರಿಗಳಂ
ನಿಗ್ರಹಿಸೋ ವ್ಯಾಘ್ರನಿವನೋ... ಉಗ್ರಪ್ರತಾಪೀ……
ಬಭ್ರುವಾಹನ : ಓ ಹೊ ಒ ಹೋ ಉಗ್ರಪ್ರತಾಪಿ ಆ!
ಸಭೆಯೊಳಗೆ ದ್ರೌಪತಿಯ ಸೀರೆಯನು
ಸೆಳೆವಾಗ ಎಲ್ಲಿ ಅಡಗಿತ್ತೋ ಈ ನಿನ್ನ ಶೌರ್ಯ
ನೂಪುರಂಗಳ ಕಟ್ಟಿ ನಟಿಸಿ ತಕಥೈ ಎಂದು
ನಾಟ್ಯ ಕಲಿಸಿದ ನಪುಂಸಕ ನೀನು
ಚಕ್ರವ್ಯೂಹದೆ ನುಗ್ಗಿ ಛಲದಿಂದ ಛೇದಿಸದೆ
ಮಗನನ್ನು ಬಲಿ ಕೊಟ್ಟ ಭ್ರಷ್ಟಾ ನೀನು
ಗಂಡುಗಲಿಗಳ ಗೆಲ್ಲೊ ಗುಂಡಿಗೆಯು ನಿನಗೆಲ್ಲೋ
ಖಂಡಿಸಿದೇ ಉಳಿಸುವೆ ಹೋಗೋ
ಹೋಗೆಲೋ ಶಿಖಂಡಿ……..
ಅರ್ಜುನ : ಫಡ ಫಡ ಶಿಖಂಡಿಯಂದಡಿಗಡಿಗೆ
ನುಡಿಯ ಬೇಡೆಲೋ ಮೂಢ
ಭಂಡರೆದೆ ಗುಂಡಿಗೆಯ ಖಂಡಿಸುತಾ ರಣಚಂಡಿ
ಗೌತಣವೀವ ಈ ಗಾಂಡೀವಿ
ಗಂಡುಗಲಿಗಳ ಗಂಡ ಉದ್ಧಂಡ
ಭೂಮಂಡಲದೊಳಖಂಡ ಕೀರ್ತಿ ಪ್ರಚಂಡ
ಬಭ್ರುವಾಹನ : ಚಂಡನೋ ಪ್ರಚಂಡನೋ ಪುಂಡನೋ
ನಿರ್ಧರಿಸುವುದು ರಣರಂಗ
ಹೂಡು ಬಾಣಗಳ ಮಾಡುವೆ ಮಾನಭಂಗ
ಅರ್ಜುನ : ಕದನದೋಳ್ ಕಲಿಪಾರ್ಥನಂ ಕೆಣಕಿ ಉಳಿದವರಿಲ್ಲ
ಬಭ್ರುವಾಹನ : ಅಬ್ಬರಿಸಿ ಭೊಬ್ಭಿರಿದರಿಲ್ಲಾರಿಗೂ ಭಯವಿಲ್ಲ
ಅರ್ಜುನ : ಆರ್ಭಟಿಸಿ ಬರುತಿದೆ ನೋಡು ಅಂತಕನ ಆಹ್ವಾನ
ಬಭ್ರುವಾಹನ : ಅಂತಕನಿಗೆ ಅಂತಕನು ಈ ಬಭ್ರುವಾಹನ…..
Yaru Thiliyaru song lyrics from Kannada Movie Babruvahana starring Dr Rajkumar, B Sarojadevi, Kanchana, Lyrics penned by Hunasuru Krishna Murthy Sung by Dr Rajkumar, P B Srinivas, Music Composed by T G Lingappa, film is Directed by Hunasuru Krishna Murthy and film is released on 1977