ಎಲ್ಲರು : ಧರಣಿ ಮಂಡಲ ಮಧ್ಯದೊಳಗೆ
ಮೆರೆಯುತಿಹ ಕರ್ನಾಟ ದೇಶದಿ ಇರುವ
ಕಾಳಿಂಗನೆಂಬ ಗೊಲ್ಲನ ಪರಿಯನೆಂತು ಪೇಳ್ವೆನು
ಎಳೆಯ ಮಾವಿನ ಮರದ ಕೆಳಗೆ
ಕೊಳಲನೂದುವ ಗೊಲ್ಲಗೌಡನು
ಬಳಸಿ ನಿಂದ ತುರುಗಳನ್ನು ಬಳಿಗೆ ಕರೆದನು ಹರುಷದಿ
ಗಂಡು : ಗಂಗೆ ಬಾರೆ ಗೌರಿ ಬಾರೆ ತುಂಗಭದ್ರೆ ತಾಯಿ ಬಾರೆ
ಪುಣ್ಯಕೋಟಿ ನೀನು ಬಾರೇ ಎಂದು ಗೊಲ್ಲನು ಕರೆದನು
ಗೊಲ್ಲ ಕರೆದ ಧ್ವನಿಯ ಕೇಳಿ ಎಲ್ಲ ಹಸುಗಳು ಬಂದು ನಿಂತು
ಚೆಲ್ಲಿ ಸೂಸಿ ಹಾಲು ಕರೆಯಲು ಅಲ್ಲಿ ತುಂಬಿತು ಬಿಂದಿಗೆ
ಎಲ್ಲರು : ಸತ್ಯವೇ ಭಗವಂತನೆಂಬ ಪುಣ್ಯಕೋಟಿಯ ಕಥೆಯಿದು
ಗಂಡು : ಹಬ್ಬಿದ ಮಲೆ ಮಧ್ಯದೊಳಗೆ ಅರ್ಭುತಾನೆಂದೆಂಬ ವ್ಯಾಘ್ರನು
ಅಬ್ಬರಿಸಿ ಹಸಿಹಸಿದು ಬೆಟ್ಟದ ಕಿಬ್ಬಿಯೊಳು ತಾನಿದ್ದನು
ಸಿಡಿದು ರೋಷದಿ ಮೊರೆಯುತ ಹುಲಿ ಗುಡುಗುಡಿಸಿ
ಭೋರಿಡುತ ಛಂಗನೆ
ತುಡುಕಲೆರಗಿದ ರಭಸಕಂಜಿ ಚೆದರಿ ಹೋದವು ಹಸುಗಳು
ಪುಣ್ಯಕೋಟಿ ಎಂಬ ಹಸುವು ತನ್ನ ಕಂದನ ನೆನೆದುಕೊಂಡು
ಮುನ್ನ ಹಾಲನು ಕೊಡುವೆನೆನುತ ಚೆಂದದಿ ತಾ ಬರುತಿರೆ
ಇಂದೆನಗೆ ಆಹಾರ ಸಿಕ್ಕಿತು ಎಂದು ಬೇಗನೆ ದುಷ್ಟ ವ್ಯಾಘ್ರನು
ಬಂದು ಬಳಸಿ ಅಡ್ಡಗಟ್ಟಿ ನಿಂದನ ಹುಲಿರಾಯನು

ಗಂಡು : ಮೇಲೆ ಬಿದ್ದು ನಿನ್ನನೀಗಲೆ ಬೀಳಹೊಯ್ವೆನು ನಿನ್ನ ಹೊಟ್ಟೆಯ
ಸೀಳಿಬಿಡುವೆನು ಎನುತ ಕೋಪದಿ ಖೂಳ ವ್ಯಾಘ್ರನು ಕೂಗಲು
ಹೆಣ್ಣು : ಒಂದು ಬಿನ್ನಹ ಹುಲಿಯೆ ಕೇಳು ಕಂದನಿರುವನು ದೊಡ್ಡಿಯೊಳಗೆ
ಒಂದು ನಿಮಿಷದಿ ಮೊಲೆಯ ಕೊಟ್ಟು ಬಂದು ಸೇರುವೆನಿಲ್ಲಿಗೆ
ಗಂಡು : ಹಸಿದ ವೇಳೆಗೆ ಸಿಕ್ಕಿದೊಡವೆಯ ವಶವ ಮಾಡದೆ ಬಿಡಲು ನೀನು
ನುಸುಳಿ ಹೋಗುವೆ ಮತ್ತೆ ಬರುವೆಯ ಹುಸಿಯನಾಡುವೆ ಎಂದಿತು
ಹೆಣ್ಣು : ಸತ್ಯವೇ ನಮ್ಮ ತಾಯಿ ತಂದೆ ಸತ್ಯವೇ ನಮ್ಮ ಬಂಧು ಬಳಗ
ಸತ್ಯ ವಾಕ್ಯಕೆ ತಪ್ಪಿ ನಡೆದರೆ ಮೆಚ್ಚನ ಪರಮಾತ್ಮನು

ಹೆಣ್ಣು : ಕೊಂದು ತಿನ್ನುವೆನೆಂಬ ಹುಲಿಗೆ ಚೆಂದದಿಂದ ಭಾಷೆ ಇತ್ತು
ಕಂದ ನಿನ್ನನು ನೋಡಿ ಹೋಗುವೆನೆಂದು ಬಂದೆನು ದೊಡ್ಡಿಗೆ
ಮಗು : ಆರ ಮೊಲೆಯನು ಕುಡಿಯಲಮ್ಮಆರ ಸೇರಿ ಬದುಕಲಮ್ಮ
ಆರ ಬಳಿಯಲಿ ಮಲಗಲಮ್ಮಆರು ನನಗೆ ಹಿತವರು
ಹೆಣ್ಣು : ಅಮ್ಮಗಳಿರಾ ಅಕ್ಕಗಳಿರಾ ನಮ್ಮ ತಾಯೊಡ ಹುಟ್ಟುಗಳಿರಾ
ನಿಮ್ಮ ಕಂದನೆಂದು ಕಾಣಿರಿ ತಬ್ಬಲಿಯನೀ ಕರುವನು
ಮುಂದೆ ಬಂದರೆ ಹಾಯಬೇಡಿ ಹಿಂದೆ ಬಂದರೆ ಒದೆಯಬೇಡಿ
ಕಂದ ನಿಮ್ಮವನೆಂದು ಕಾಣಿರಿ ತಬ್ಬಲಿಯ ನೀ ಕರುವನು

ಹೆಣ್ಣು : ತಬ್ಬಲಿಯು ನೀನಾದೆ ಮಗನೆ ಹೆಬ್ಬುಲಿಯ ಬಾಯನ್ನು ಹೋಗುವೆನು
ಇಬ್ಬರ ಋಣ ತೀರಿತೆಂದು ತಬ್ಬಿಕೊಂಡಿತು ಕಂದನ
ಗಂಡು : ಗೋವು ಕರುವನು ಬಿಟ್ಟು ಬಂದು ಸಾವಕಾಶವ ಮಾಡದಂತೆ
ಗವಿಯ ಬಾಗಿಲ ಸೇರಿ ನಿಂತು ತವಕದಲಿ ಹುಲಿಗೆಂದಿತು
ಹೆಣ್ಣು : ಖಂಡವಿದೆಕೋ ಮಾಂಸವಿದೆಕೋ ಗುಂಡಿಗೆಯ ಬಿಸಿ ರಕ್ತವಿದೆಕೋ
ಚಂಡ ವ್ಯಾಘ್ರನೆ ನೀನಿದೆಲ್ಲವ ನುಂಡು ಸಂತಸದಿಂದಿರು
ಗಂಡು : ಪುಣ್ಯಕೋಟಿಯ ಮಾತ ಕೇಳಿ ಕಣ್ಣ ನೀರನು ಸುರಿಸಿ ನೊಂದು
ಕನ್ನೆಯಿವಳನು ಕೊಂದು ತಿಂದರೆ ಮೆಚ್ಚನ ಪರಮಾತ್ಮನು
ಎನ್ನ ಒಡಹುಟ್ಟಕ್ಕ ನೀನು ನಿನ್ನ ಕೊಂದು ಏನ ಪಡೆವೆನು
ಎನ್ನುತ ಹುಲಿ ಹಾರಿ ನೆಗೆದು ತನ್ನ ಪ್ರಾಣವ ಬಿಟ್ಟಿತು

ಎಲ್ಲರು : ಪುಣ್ಯಕೋಟಿಯು ನಲಿದು ಕರುವಿಗೆ ಉಣ್ಣಿಸಿತು ಮೊಲೆಯ ಬೇಗದಿ
ಚೆನ್ನ ಗೊಲ್ಲನ ಕರೆದು ತಾನು ಮುನ್ನ ತಾನಿಂತೆಂದಿತು
ಎನ್ನ ವಂಶದ ಗೋವ್ಗಳೊಳಗೆ ನಿನ್ನ ವಂಶದ ಗೊಲ್ಲರೊಳಗೆ
ಮುನ್ನ ಪ್ರತಿ ಸಂಕ್ರಾಂತಿಯೊಳಗೆ ಚೆನ್ನ ಕೃಷ್ಣನ ಭಜಿಸಿರೈ
ಈವನು ಸೌಭಾಗ್ಯ ಸಂಪದ ಭಾವಜಾಪಿತ ಕೃಷ್ಣನು

Dharani Mandala Madhyadolage song lyrics from Kannada Movie Thabbaliyu Neenade Magane starring Paula Lindse, Lakshmi Krishnamurthy, Manu, Lyrics penned by Folk Sung by P B Srinivas, B K Sumitra, Vidyarani, Music Composed by Bhaskar Chandavarkar, film is Directed by B V Karanth, Girish Karnad and film is released on 1977